Footer Logo

Friday, March 26, 2021

NIFT Recruitment 2021: 42 ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

  ADMIN       Friday, March 26, 2021

NIFT Recruitment 2021: 42 ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ




ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ 42 ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಮೇ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ. 

ವಿದ್ಯಾರ್ಹತೆ: ಪಿಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

ವಯೋಮಿತಿ: ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. 

ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. 

ವೇತನ: ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,400/-ರೂ ವೇತನವನ್ನು ನೀಡಲಾಗುವುದು. 

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. 

ಅರ್ಜಿ ಶುಲ್ಕ: ಅರ್ಜಿದಾರರು 1,180/-ರೂ ಅರ್ಜಿ ಶುಲ್ಕವನ್ನು ಡಿಡಿ/ಬ್ಯಾಂಕ್ ಚೆಕ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ. 

ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅರ್ಜಿಯನ್ನು ಮೇ 7,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ. 

ಕಚೇರಿ ವಿಳಾಸ: The Registrar, NIFT Campus, Hauz Khas, Near Gulmohar park, New delhi-110016. 

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ : ಕ್ಲಿಕ್ ಮಾಡಿ

 ನೇಮಕಾತಿ ಬಗೆಗಿನ ಅಧಿಸೂಚನೆ: ಕ್ಲಿಕ್ ಮಾಡಿ


logoblog

Thanks for reading NIFT Recruitment 2021: 42 ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Previous
« Prev Post

No comments:

Post a Comment

Popular Posts